ಆದಿಕಾಂಡ 43:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಜೋಸೆಫನು ನೋಡಿದನು. ಕೂಡಲೆ ಗೃಹನಿರ್ವಾಹಕನನ್ನು ಕರೆದು, “ಈ ಜನರು ನನ್ನ ಸಂಗಡ ಈ ಮಧ್ಯಾಹ್ನ ಊಟಮಾಡಬೇಕಾಗಿ ಇದೆ; ಇವರನ್ನು ಮನೆಯೊಳಗೆ ಕರೆದುಕೊಂಡು ಹೋಗು. ಮಾಂಸದ ಅಡುಗೆ ಮಾಡಿ, ಎಲ್ಲವನ್ನು ಸಿದ್ಧಪಡಿಸು,” ಎಂದು ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬೆನ್ಯಾಮೀನನು ಅವರ ಸಂಗಡ ಇರುವದನ್ನು ಯೋಸೇಫನು ಕಂಡು ತನ್ನ ಮನೆವಾರ್ತೆಯವನನ್ನು ಕರಸಿ - ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟಮಾಡಬೇಕಾಗಿದೆ; ಇವರನ್ನು ಮನೆಯೊಳಗೆ ಕರೆದುಕೊಂಡು ಹೋಗಿ ಪಶುವನ್ನು ಕೊಯಿಸಿ ಎಲ್ಲಾ ಸಿದ್ಧಪಡಿಸು ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಸಹೋದರರೊಂದಿಗೆ ಬೆನ್ಯಾಮೀನನು ಇರುವುದನ್ನು ಕಂಡ ಯೋಸೇಫನು ತನ್ನ ಸೇವಕನಿಗೆ, “ಈ ಜನರನ್ನು ನನ್ನ ಮನೆಯೊಳಗೆ ಕರೆದುಕೊಂಡು ಹೋಗು; ಕುರಿಯನ್ನು ಕೊಯ್ದು ಅಡಿಗೆ ಮಾಡು. ಈ ಜನರು ಈ ಹೊತ್ತು ಮಧ್ಯಾಹ್ನ ನನ್ನೊಂದಿಗೆ ಊಟಮಾಡುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೋಸೇಫನು ಬೆನ್ಯಾಮೀನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ, “ಈ ಮನುಷ್ಯರನ್ನು ಮನೆಗೆ ಕರೆದುಕೊಂಡು ಹೋಗಿ, ಮಾಂಸದ ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಮಧ್ಯಾಹ್ನದಲ್ಲಿ ನನ್ನ ಸಂಗಡ ಊಟಮಾಡಬೇಕು,” ಎಂದನು. ಅಧ್ಯಾಯವನ್ನು ನೋಡಿ |