Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಐಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, “ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈಜಿಪ್ಟಿನಿಂದ ತಂದ ದವಸಧಾನ್ಯ ಮುಗಿದು ಹೋಗಿತ್ತು. ಯಕೋಬನು ತನ್ನ ಪುತ್ರರಿಗೆ, ” ನೀವು ಪುನಃ ಹೋಗಿ ಸ್ವಲ್ಪ ಧಾನ್ಯವನ್ನು ಕೊಂಡುಕೊಂಡು ಬನ್ನಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ಐಗುಪ್ತದೇಶದಿಂದ ತಂದಿದ್ದ ದವಸವು ಮುಗಿದನಂತರ ಅವರ ತಂದೆಯು ಅವರಿಗೆ - ನೀವು ತಿರಿಗಿ ಹೋಗಿ ಇನ್ನು ಸ್ವಲ್ಪ ಧಾನ್ಯವನ್ನು ಕೊಂಡುಕೊಂಡು ಬನ್ನಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರು ಈಜಿಪ್ಟಿನಿಂದ ತಂದಿದ್ದ ದವಸಧಾನ್ಯಗಳನ್ನೆಲ್ಲ ಊಟ ಮಾಡಿದರು. ದವಸಧಾನ್ಯಗಳು ಮುಗಿದು ಹೋದಾಗ ಯಾಕೋಬನು, ತನ್ನ ಗಂಡುಮಕ್ಕಳಿಗೆ, “ಈಜಿಪ್ಟಿಗೆ ಮತ್ತೆ ಹೋಗಿ ನಮಗೆ ಊಟಕ್ಕೆ ದವಸಧಾನ್ಯಗಳನ್ನು ಕೊಂಡುಕೊಂಡು ಬನ್ನಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಈಜಿಪ್ಟಿನಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ, “ತಿರುಗಿ ಹೋಗಿ ನಮಗಾಗಿ ಸ್ವಲ್ಪ ಆಹಾರ ಕೊಂಡುಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:2
11 ತಿಳಿವುಗಳ ಹೋಲಿಕೆ  

ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.


ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.


ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.


“ಅಯ್ಯಾ, ಮೊದಲನೆಯ ಸಾರಿ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವು.


ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ, ನಿನಗೆ ಧಾನ್ಯವನ್ನು ಖರೀದಿಸಿಕೊಂಡು ತರುತ್ತೇವೆ.


ಕಾನಾನ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.


ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ.


“ನಮ್ಮ ತಂದೆಯು, ‘ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ’ ಎಂದು ಹೇಳಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು