Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದನು. ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಡಿಸಿ, ಅವರ ಕತ್ತೆಗಳಿಗೂ ಮೇವು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಮೇಲೆ ಗೃಹನಿರ್ವಾಹಕನು ಅವರೆಲ್ಲರನ್ನು ಜೋಸೆಫನ ಮನೆಯೊಳಗೆ ಕರೆತಂದು ಕಾಲು ತೊಳೆದುಕೊಳ್ಳುವುದಕ್ಕೆ ನೀರನ್ನು ಕೊಡಿಸಿದನು. ಅವರ ಕತ್ತೆಗಳಿಗೆ ಮೇವು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಸೇರಿಸಿ ಕಾಲುಗಳನ್ನು ತೊಳೆಯುವದಕ್ಕೆ ನೀರನ್ನು ಕೊಡಿಸಿ ಅವರ ಕತ್ತೆಗಳಿಗೆ ಮೇವು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸೇವಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋಗಿ ಅವರಿಗೆ ನೀರನ್ನು ಕೊಟ್ಟನು. ಅವರು ತಮ್ಮ ಕಾಲುಗಳನ್ನು ತೊಳೆದುಕೊಂಡರು. ಬಳಿಕ ಅವನು ಅವರ ಕತ್ತೆಗಳಿಗೆ ಆಹಾರವನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ, ಅವರು ತಮ್ಮ ಕಾಲುಗಳನ್ನು ತೊಳೆದುಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:24
7 ತಿಳಿವುಗಳ ಹೋಲಿಕೆ  

ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.


ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನು, ಮೇವನ್ನು ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡ ಇದ್ದವರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಟ್ಟನು.


ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ, “ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು.


“ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.


ಅವನಿಗೆ, “ಮನೆಗೆ ಹೋಗಿ ಕೈಕಾಲು ತೊಳೆದುಕೋ” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು