ಆದಿಕಾಂಡ 43:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, “ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಬಳಿಕ, “ನೀವು ಹೇಳಿದ ಮುಪ್ಪುವಯಸ್ಸಿನ ನಿಮ್ಮ ತಂದೆ ಕ್ಷೇಮವೋ? ಇನ್ನು ಬದುಕಿದ್ದಾನೋ?" ಎಂದು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿ - ನೀವು ಹೇಳಿದ ಮುದುಕನಾಗಿರುವ ನಿಮ್ಮ ತಂದೆಗೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ ಎಂದು ಕೇಳಲು ಅವರು ಬೊಗ್ಗಿ ನಮಸ್ಕಾರಮಾಡಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೋಸೇಫನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಯೋಸೇಫನು “ನೀವು ನನಗೆ ತಿಳಿಸಿದ ನಿಮ್ಮ ವೃದ್ಧನಾದ ತಂದೆ ಕ್ಷೇಮವಾಗಿದ್ದಾನೆಯೇ? ಇನ್ನೂ ಜೀವಂತವಾಗಿರುವನೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಯೋಸೇಫನು ಅವರ ಕ್ಷೇಮಸಮಾಚಾರವನ್ನು ಕೇಳಿ, “ನೀವು ಹೇಳಿದ ವೃದ್ಧನಾದ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದನು. ಅಧ್ಯಾಯವನ್ನು ನೋಡಿ |