ಆದಿಕಾಂಡ 43:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಪರಿಚಾರಕರು ಅವನಿಗೆ ಬೇರೆ, ಅವನ ಅಣ್ಣತಮ್ಮಂದಿರಿಗೇ ಬೇರೆ, ಅವನ ಸಂಗಡವಿದ್ದ ಈಜಿಪ್ಟಿನವರಿಗೇ ಬೇರೆ, ಹೀಗೆ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಈಜಿಪ್ಟಿನವರು ಹಿಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವುದಿಲ್ಲ; ಅದು ಅವರಿಗೆ ಅಸಹ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಐಗುಪ್ತ್ಯರು ಇಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವದಿಲ್ಲ; ಅದು ಅವರಿಗೆ ಅಸಹ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯೋಸೇಫನೊಬ್ಬನೇ ಒಂದು ಮೇಜಿನಲ್ಲಿ ಊಟ ಮಾಡಿದನು. ಅವನ ಸಹೋದರರು ಒಟ್ಟಾಗಿ ಮತ್ತೊಂದು ಮೇಜಿನಲ್ಲಿ ಊಟ ಮಾಡಿದರು. ಈಜಿಪ್ಟಿನವರು ಬೇರೊಂದು ಮೇಜಿನಲ್ಲಿ ಊಟ ಮಾಡಿದರು. ಇಬ್ರಿಯ ಜನರೊಂದಿಗೆ ಊಟ ಮಾಡುವುದು ತಪ್ಪೆಂಬುದು ಅವರ ನಂಬಿಕೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆಗ ಅವರು ಯೋಸೇಫನಿಗೆ, ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಈಜಿಪ್ಟಿನವರಿಗೂ ಬೇರೆಬೇರೆಯಾಗಿ ಊಟಕ್ಕೆ ಇಟ್ಟರು. ಏಕೆಂದರೆ ಈಜಿಪ್ಟಿನವರು ಹಿಬ್ರಿಯರ ಕೂಡ ಊಟಮಾಡುತ್ತಿರಲಿಲ್ಲ. ಅದು ಈಜಿಪ್ಟಿನವರಿಗೆ ಅಸಹ್ಯವಾಗಿತ್ತು. ಅಧ್ಯಾಯವನ್ನು ನೋಡಿ |