ಆದಿಕಾಂಡ 44:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಯೆಹೂದನು ಹತ್ತಿರಕ್ಕೆ ಬಂದು, “ನನ್ನೊಡೆಯಾ, ತಮ್ಮ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ; ನನ್ನ ಮೇಲೆ ಸಿಟ್ಟುಮಾಡಬೇಡಿ; ತಾವು ಫರೋಹನಿಗೆ ಸಮಾನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಯೆಹೂದನು ಹತ್ತರಕ್ಕೆ ಬಂದು - ನಿನ್ನ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ, ನನ್ನ ಮೇಲೆ ಸಿಟ್ಟು ಮಾಡಬಾರದು; ನೀನು ಫರೋಹನಿಗೆ ಸಮಾನನಾಗಿದ್ದೀಯೆಂದು ನಾನು ಬಲ್ಲೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೂದನು ಅವನ ಸಮೀಪಕ್ಕೆ ಬಂದು, “ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಏಕೆಂದರೆ ನೀನು ಫರೋಹನಿಗೆ ಸಮಾನನು. ಅಧ್ಯಾಯವನ್ನು ನೋಡಿ |