Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕಿರಿಯವನ ಚೀಲದಲ್ಲಿ ಅವನು ದವಸಕ್ಕೆ ತಂದ ಹಣವನ್ನಲ್ಲದೇ, ತನ್ನ ಬೆಳ್ಳಿಯ ಪಾನ ಪಾತ್ರೆಯನ್ನು ಇಡಬೇಕು” ಎಂದು ಅಪ್ಪಣೆಕೊಡಲು, ಗೃಹನಿರ್ವಾಹಕನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕಿರಿಯವನ ಚೀಲದ ಬಾಯೊಳಗೆ ಅವನು ದವಸಕ್ಕೆ ತಂದ ಹಣವನ್ನಲ್ಲದೆ ನನ್ನ ಬೆಳ್ಳಿಯ ಪಾನಪಾತ್ರೆಯನ್ನೂ ಇಡು,” ಎಂದು ಅಪ್ಪಣೆಕೊಟ್ಟನು. ಗೃಹನಿರ್ವಾಹಕನು ಅದರಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನವನ ಹಣದ ಗಂಟನ್ನಿಟ್ಟು ಕಿರಿಯವನ ಚೀಲದ ಬಾಯೊಳಗೆ ಅವನು ದವಸಕ್ಕೆ ತಂದ ಹಣವನ್ನಲ್ಲದೆ ನನ್ನ ಬೆಳ್ಳಿಯ ಪಾನಪಾತ್ರೆಯನ್ನೂ ಇಡಬೇಕೆಂದು ಅಪ್ಪಣೆಕೊಡಲು ಮನೆವಾರ್ತೆಯವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕಿರಿಯ ಸಹೋದರನ ಚೀಲದಲ್ಲಿಯೂ ಹಣವನ್ನು ಇಡು. ಅಲ್ಲದೆ ನನ್ನ ವಿಶೇಷವಾದ ಬೆಳ್ಳಿ ಬಟ್ಟಲನ್ನು ಸಹ ಅವನ ಚೀಲದಲ್ಲಿಡು” ಎಂದು ಆಜ್ಞಾಪಿಸಿದನು. ಅಂತೆಯೇ ಸೇವಕನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಬೆಳ್ಳಿಯ ಪಾತ್ರೆಯನ್ನು ಚಿಕ್ಕವನ ಚೀಲದ ಬಾಯಲ್ಲಿ ಅವನ ಧಾನ್ಯ ಹಾಗೂ ಹಣದ ಸಂಗಡ ಇಡು,” ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿದಂತೆಯೇ ಅವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:2
12 ತಿಳಿವುಗಳ ಹೋಲಿಕೆ  

ಇದನ್ನು ಆಜ್ಞಾರೂಪವಾಗಿ ಹೇಳುತ್ತಿಲ್ಲ ಆದರೆ ಇತರರ ಆಸಕ್ತಿಗೆ ಹೋಲಿಸಿ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾದದ್ದೆಂಬುದನ್ನು ಸಾಬೀತು ಮಾಡಬೇಕೆಂದು ಹೇಳುತ್ತೇನೆ.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.


ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು.


ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.


ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, “ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ.


ಅವರೆಲ್ಲರೂ ಬೆಳಿಗ್ಗೆ ಹೊತ್ತು ಮೂಡುವಾಗ ಅಪ್ಪಣೆ ಪಡೆದು, ಕತ್ತೆಗಳ ಸಹಿತವಾಗಿ ಹೊರಟುಹೋದರು.


ಅವನು ಹಿರಿಯವನಿಂದ ಹಿಡಿದು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.


ಆ ಮೇಲೆ ಯೋಸೇಫನು ತನ್ನ ಆಳುಗಳಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು