Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಏನಾದರು ಆಪತ್ತು ಒದಗಿದರೆ, ಈ ನರೆಕೂದಲಿನ ಮುದುಕ ಸಂಕಟದಿಂದ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ನೀವು ಕಾರಣರಾಗುವಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನೀವು ನನ್ನ ಮತ್ತೊಬ್ಬ ಮಗನನ್ನು ನನ್ನ ಬಳಿಯಿಂದ ಕರೆದುಕೊಂಡು ಹೋಗುವಾಗ ಅವನಿಗೆ ಏನಾದರೂ ಸಂಭವಿಸಿದರೆ, ನಾನು ದುಃಖ ತಾಳಲಾರದೆ ಸತ್ತುಹೋಗುವೆನು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಅವನಿಗೂ ಕೇಡು ಬಂದರೆ, ನನ್ನ ಮುದಿ ತಲೆಯು ದುಃಖದಿಂದ ಸಮಾಧಿಗೆ ಇಳಿಯುವಂತೆ ಮಾಡುವಿರಿ,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:29
8 ತಿಳಿವುಗಳ ಹೋಲಿಕೆ  

ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.


ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.


ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.


ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು.


ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.


ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.


ಆದರೆ ಯಾಕೋಬನು ಯೋಸೇಫನ ತಮ್ಮನಾದ ಬೆನ್ಯಾಮೀನನಿಗೆ “ಕೇಡು ಉಂಟಾದೀತೆಂದು” ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು