Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ಪಟ್ಟಣಗಳನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ, ಜೋಸೆಫನು ತನ್ನ ಗೃಹನಿರ್ವಾಹಕನಿಗೆ, ‘ನೀನೆದ್ದು ಆ ಜನರನ್ನು ಹಿಂದಟ್ಟಿ ಹೋಗಿ ಹಿಡಿ. ಅವರಿಗೆ, ‘ನೀವು ಉಪಕಾರಕ್ಕೆ ಪ್ರತಿಯಾಗಿ ಏಕೆ ಅಪಕಾರ ಮಾಡಿದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ ಯೋಸೇಫನು ತನ್ನ ಮನೆವಾರ್ತೆಯವನಿಗೆ - ನೀನೆದ್ದು ಆ ಮನುಷ್ಯರನ್ನು ಹಿಂದಟ್ಟಿ ಸಂಧಿಸಿ - ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ನಗರವನ್ನು ಬಿಟ್ಟುಹೋದ ಮೇಲೆ, ಯೋಸೇಫನು ತನ್ನ ಸೇವಕನಿಗೆ, “ಹೋಗು, ಆ ಜನರನ್ನು ಹಿಂಬಾಲಿಸು. ಅವರನ್ನು ತಡೆದು ಅವರಿಗೆ, ‘ನಾವು ನಿಮಗೆ ಒಳ್ಳೆಯವರಾಗಿದ್ದೆವು; ಆದರೆ ನೀವು ನಮಗೇಕೆ ಕೆಟ್ಟದ್ದನ್ನು ಮಾಡಿದಿರಿ? ನನ್ನ ಒಡೆಯನ ಬೆಳ್ಳಿ ಬಟ್ಟಲನ್ನು ನೀವೇಕೆ ಕದ್ದುಕೊಂಡು ಬಂದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವುದಕ್ಕಿಂತ ಮುಂಚೆ ಯೋಸೇಫನು ಮನೆಯ ಗೃಹನಿರ್ವಾಹಕನಿಗೆ, “ಆ ಮನುಷ್ಯರ ಹಿಂದೆ ಹೋಗು. ಅವರು ಸಿಕ್ಕಿದಾಗ, ‘ಏಕೆ ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಿದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:4
9 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,


ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.


ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.


ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.


ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀನು ನಮಗೆ ಅನುಗ್ರಹಿಸಿದ ಸ್ವತ್ತಿನೊಳಗಿಂದ ನಮ್ಮನ್ನು ಹೊರ ಓಡಿಸುವುದಕ್ಕಾಗಿ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.


ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನೂ. ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದಿ.


ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು.


ಅವರೆಲ್ಲರೂ ಬೆಳಿಗ್ಗೆ ಹೊತ್ತು ಮೂಡುವಾಗ ಅಪ್ಪಣೆ ಪಡೆದು, ಕತ್ತೆಗಳ ಸಹಿತವಾಗಿ ಹೊರಟುಹೋದರು.


ಸಿಕ್ಕಿದಾಗ, ಅವರು ದುಃಖಾಕ್ರಾಂತರಾಗಿ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂತಿರುಗಿ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು