ಆದಿಕಾಂಡ 44:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ? ಅವನು ದೈವೋಕ್ತಿಯನ್ನು ಹೇಳುವವನಲ್ಲವೆ? ನೀವು ಹೀಗೆ ಮಾಡಿದ್ದು ಕೆಟ್ಟಕೆಲಸ” ಎಂದು ಅವರಿಗೆ ಹೇಳು ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ಪಾತ್ರೆಯಿಂದಲೆ ಅಲ್ಲವೆ ನನ್ನ ದಣಿ ಪಾನಮಾಡುವುದು? ಅದರಲ್ಲಿ ನೋಡೇ ಅಲ್ಲವೆ ಶಕುನ ಹೇಳುವುದು? ನೀವು ಮಾಡಿರುವುದು ಮಹಾ ನೀಚತನ, ಎನ್ನಬೇಕು,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ. ಅದರಲ್ಲಿ ನೋಡಿ ಶಕುನ ಹೇಳುವದಿಲ್ಲವೇ. ನೀವು ಮಾಡಿದ್ದು ಬಹಳ ಕೆಟ್ಟದ್ದು ಅನ್ನಬೇಕೆಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಈ ಬಟ್ಟಲಿನಲ್ಲಿ ನನ್ನ ಒಡೆಯನು ಕುಡಿಯುತ್ತಾನೆ. ದೇವರಿಗೆ ಪ್ರಶ್ನೆಗಳನ್ನು ಕೇಳಲು ಅವನು ಈ ಬಟ್ಟಲನ್ನೇ ಉಪಯೋಗಿಸುವನು. ನೀವು ಅವನ ಬಟ್ಟಲನ್ನು ಕದ್ದುಕೊಂಡು ತಪ್ಪುಮಾಡಿದಿರಿ’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ,’ ಎಂದು ಅವರಿಗೆ ಹೇಳು,” ಎಂದನು. ಅಧ್ಯಾಯವನ್ನು ನೋಡಿ |