ಆದಿಕಾಂಡ 44:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ, ಅವನು ಮರಣ ದಂಡನೆಯನ್ನು ಹೊಂದಲಿ. ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ದಾಸರಾಗುವೆವು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆ ಪಾತ್ರೆ ನಿಮ್ಮ ಸೇವಕರಾದ ನಮ್ಮಲ್ಲಿ ಯಾರಾದರ ಬಳಿ ಸಿಕ್ಕಿದ್ದಾದರೆ ಅವನಿಗೆ ಮರಣದಂಡನೆ ಆಗಲಿ! ಅದುಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಊಳಿಗದವರಾಗುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ ಅವನು ಮರಣದಂಡನೆಯನ್ನು ಹೊಂದಲಿ; ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾವಿುಗೆ ದಾಸರಾಗುವೆವು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀನು ಬೆಳ್ಳಿಯ ಬಟ್ಟಲನ್ನು ನಮ್ಮ ಯಾರ ಚೀಲಗಳಲ್ಲಿ ಕಂಡರೂ, ಆ ವ್ಯಕ್ತಿಯು ಸಾಯಲಿ, ನೀನು ಅವನನ್ನು ಕೊಲ್ಲಬಹುದು; ನಾವು ನಿನ್ನ ಗುಲಾಮರಾಗಿರುವೆವು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವುದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು,” ಎಂದರು. ಅಧ್ಯಾಯವನ್ನು ನೋಡಿ |