Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತನ್ನ ತಮ್ಮನಾದ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬಳಿಕ ಜೋಸೆಫನು ತನ್ನ ತಮ್ಮ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತನ್ನ ತಮ್ಮನಾದ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಮೇಲೆ ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನು ಸಹ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ತನ್ನ ತಮ್ಮ ಬೆನ್ಯಾಮೀನನ ಕುತ್ತಿಗೆಯನ್ನು ಅಪ್ಪಿಕೊಂಡು ಅತ್ತನು, ಬೆನ್ಯಾಮೀನನೂ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:14
9 ತಿಳಿವುಗಳ ಹೋಲಿಕೆ  

ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು.


ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು.


ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು.


ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಜೋರಾಗಿ ಅತ್ತು ಆಕೆಗೆ,


ಎದ್ದು ತನ್ನ ತಂದೆಯ ಕಡೆಗೆ ಬಂದನು. “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.


ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.


ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.


ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತರಿಗೂ, ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು.


ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು