ಆದಿಕಾಂಡ 45:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆದರೆ ಜೋಸೆಫನು ಹೇಳಿಕಳಿಸಿದ ಎಲ್ಲ ಮಾತುಗಳನ್ನು ಕೇಳಿ, ತನ್ನ ಪ್ರಯಾಣಕ್ಕಾಗಿ ಅವನಿಂದ ಬಂದಿದ್ದ ಬಂಡಿಗಳನ್ನು ನೋಡಿ ಅವರ ತಂದೆ ಯಕೋಬನಿಗೆ ಹೊಸ ಜೀವ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ತರುವಾಯ ಯೋಸೇಫನು ಹೇಳಿಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿ ಇಸ್ರಾಯೇಲನೆನಿಸಿಕೊಳ್ಳುವ ಅವರ ತಂದೆ ಯಾಕೋಬನು ಚೇತರಿಸಿಕೊಂಡು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದರೆ ಯೋಸೇಫನು ತಮಗೆ ಹೇಳಿದ್ದೆಲ್ಲವನ್ನು ಸಹೋದರರು ತಮ್ಮ ತಂದೆಗೆ ಹೇಳಿದರು. ಆಮೇಲೆ ತನ್ನನ್ನು ಈಜಿಪ್ಟಿಗೆ ಕರೆದುಕೊಂಡು ಬರಲು ಯೋಸೇಫನು ಕಳುಹಿಸಿದ್ದ ರಥಗಳನ್ನು ಯಾಕೋಬನು ನೋಡಿ ಉಲ್ಲಾಸಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದರು. ಅವನನ್ನು ಕರೆದುಕೊಂಡು ಹೋಗುವುದಕ್ಕೆ ಯೋಸೇಫನು ಕಳುಹಿಸಿದ ರಥಗಳನ್ನು ಅವನು ನೋಡಿದಾಗ ಯಾಕೋಬನ ಆತ್ಮವು ಉಜ್ಜೀವಿಸಿತು. ಅಧ್ಯಾಯವನ್ನು ನೋಡಿ |