ಆದಿಕಾಂಡ 45:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೋಸೇಫನು, “ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ” ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ “ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಜೋಸೆಫನು, “ಹತ್ತಿರಕ್ಕೆ ಬನ್ನಿ” ಎನ್ನಲು, ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ, “ಈಜಿಪ್ಟ್ ದೇಶಕ್ಕೆ ಹೋಗಲಿ" ಎಂದು ನೀವು ಮಾರಿಬಿಟ್ಟ ನಿಮ್ಮ ತಮ್ಮ ಜೋಸೆಫ್ ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೋಸೇಫನು - ನನ್ನ ಹತ್ತರಕ್ಕೆ ಬನ್ನಿರಿ ಎಂದು ತನ್ನಣ್ಣಂದಿರಿಗೆ ಹೇಳಲು ಅವರು ಹತ್ತರಕ್ಕೆ ಬಂದರು. ಅವನು ಅವರಿಗೆ - ಐಗುಪ್ತದೇಶಕ್ಕೆ ಸೇರುವಂತೆ ನೀವು ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನೇ ನಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೋಸೇಫನು ಮತ್ತೆ ತನ್ನ ಸಹೋದರರಿಗೆ, “ನನ್ನ ಬಳಿಗೆ ಬನ್ನಿ. ನನ್ನ ಹತ್ತಿರ ಬನ್ನಿ ಎಂದು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಆದ್ದರಿಂದ ಸಹೋದರರು ಯೋಸೇಫನ ಹತ್ತಿರ ಹೋದರು. ಯೋಸೇಫನು ಅವರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನೀವು ಈಜಿಪ್ಟಿನವರಿಗೆ ಯಾವನನ್ನು ಗುಲಾಮನನ್ನಾಗಿ ಮಾರಿದಿರೋ ಅವನೇ ನಾನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಯೋಸೇಫನು ತನ್ನ ಸಹೋದರರಿಗೆ, “ನನ್ನ ಬಳಿಗೆ ಬನ್ನಿರಿ,” ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು, “ನೀವು ಈಜಿಪ್ಟಿಗೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ! ಅಧ್ಯಾಯವನ್ನು ನೋಡಿ |