ಆದಿಕಾಂಡ 46:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತೈಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾನೇ ನಿನ್ನೊಂದಿಗೆ ಈಜಿಪ್ಟಿಗೆ ಬರುವೆನು. ಅಲ್ಲಿಂದ ನಿನ್ನನ್ನು ನಿಶ್ಚಯವಾಗಿ ವಾಪಸ್ಸು ಕರೆದುಕೊಂಡು ಬರುವೆನು. ನೀನು ಸಾಯುವ ಕಾಲದಲ್ಲಿ ಜೋಸೆಫನು ಹಾಜರಿದ್ದು ನಿನ್ನ ಕಣ್ಣುಗಳನ್ನು ಮುಚ್ಚುವನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ತಿರಿಗಿ ಕರೆದುಕೊಂಡು ಬರುವೆನು; [ನಿನ್ನ ಅವಸಾನಕಾಲದಲ್ಲಿ] ಯೋಸೇಫನು ನಿನ್ನ ಕಣ್ಣುಗಳ ಮೇಲೆ ಕೈಯಿಡುವನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ನಿನ್ನೊಂದಿಗೆ ಈಜಿಪ್ಟಿಗೆ ಬರುವೆನು. ಬಳಿಕ ನಾನೇ ನಿನ್ನನ್ನು ಮತ್ತೆ ಈಜಿಪ್ಟಿನಿಂದ ಕರೆದುಕೊಂಡು ಬರುವೆನು. ನೀನು ಈಜಿಪ್ಟಿನಲ್ಲಿ ಮರಣ ಹೊಂದಿದರೂ ಯೋಸೇಫನು ನಿನ್ನ ಸಂಗಡವಿರುವನು. ನೀನು ಸತ್ತಾಗ ಅವನು ತನ್ನ ಕೈಗಳಿಂದ ನಿನ್ನ ಕಣ್ಣುಗಳನ್ನು ಮುಚ್ಚುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನೇ ನಿನ್ನ ಸಂಗಡ ಈಜಿಪ್ಟಿಗೆ ಹೋಗುವೆನು. ನಾನು ನಿಶ್ಚಯವಾಗಿ ನಿನ್ನನ್ನು ಕಾನಾನಿಗೆ ತಿರುಗಿ ಬರಮಾಡುವೆನು. ಯೋಸೇಫನು ನಿನ್ನ ಅಂತಿಮ ಕಾಲದಲ್ಲಿ ನೀನು ಕಣ್ಣುಮುಚ್ಚುವಾಗ ಇರುವನು,” ಎಂದನು. ಅಧ್ಯಾಯವನ್ನು ನೋಡಿ |