ಆದಿಕಾಂಡ 46:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರೆದುಕೊಂಡು ಬರುವುದಕ್ಕೆ ಕಳುಹಿಸಿದ್ದ ರಥಗಳಲ್ಲಿ ಇಸ್ರಾಯೇಲನ ಮಕ್ಕಳು, ತಮ್ಮ ತಂದೆಯಾದ ಯಾಕೋಬನನ್ನೂ, ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬಳಿಕ ಯಕೋಬನು ಬೇರ್ಷೆಬದಿಂದ ಪ್ರಯಾಣ ಮಾಡಿದನು. ಯಕೋಬನ ಮಕ್ಕಳು ತಮ್ಮ ತಂದೆಯಾದ ಯಕೋಬನನ್ನು ಮತ್ತು ತಮ್ಮ ಮಡದಿಮಕ್ಕಳನ್ನು ಫರೋಹನು ಕಳಿಸಿದ್ದ ಬಂಡಿಗಳಲ್ಲಿ ಕೂರಿಸಿಕೊಂಡು ಹೊರಟರು.. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರಕೊಂಡು ಬರುವದಕ್ಕೆ ಕಳುಹಿಸಿದ್ದ ರಥಗಳ ಮೇಲೆ ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಮೇಲೆ ಯಾಕೋಬನು ಬೇರ್ಷೆಬವನ್ನು ಬಿಟ್ಟು ಈಜಿಪ್ಟಿಗೆ ಪ್ರಯಾಣ ಮಾಡಿದನು. ಇಸ್ರೇಲನ ಗಂಡುಮಕ್ಕಳು ತಮ್ಮ ತಂದೆಯನ್ನೂ ತಮ್ಮ ಹೆಂಡತಿಯರನ್ನೂ ತಮ್ಮ ಎಲ್ಲಾ ಮಕ್ಕಳನ್ನೂ ಕರೆದುಕೊಂಡು ಹೋದರು. ಫರೋಹನು ಕಳುಹಿಸಿದ್ದ ರಥಗಳಲ್ಲಿ ಅವರು ಪ್ರಯಾಣ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಆಗ ಇಸ್ರಾಯೇಲರು ತಮ್ಮ ತಂದೆ ಯಾಕೋಬನನ್ನೂ, ತಮ್ಮ ಮಕ್ಕಳನ್ನೂ, ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ರಥಗಳಲ್ಲಿ ಕೂರಿಸಿಕೊಂಡು ಹೋದರು. ಅಧ್ಯಾಯವನ್ನು ನೋಡಿ |