Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೇನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈಜಿಪ್ಟಿಗೆ ಬಂದು ಸೇರಿದ ಯಕೋಬನ ಮತ್ತು ಅವನ ಮಕ್ಕಳಾದ ಇಸ್ರಯೇಲರ ಹೆಸರುಗಳು ಇವು - ಯಕೋಬನ ಜೇಷ್ಠ ಪುತ್ರ ರೂಬೇನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲನೆಂಬ ಯಾಕೋಬನು ತನ್ನ ಮಕ್ಕಳೊಡನೆ ಐಗುಪ್ತದೇಶಕ್ಕೆ ಬಂದಾಗ ಅವನಿಗಿದ್ದ ಸಂತಾನದವರ ವಿವರಣೆ. ಯಾಕೋಬನ ಚೊಚ್ಚಲ ಮಗನು ರೂಬೇನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲನ ಸಂಗಡ ಈಜಿಪ್ಟಿಗೆ ಹೋದ ಅವನ ಮಕ್ಕಳ ಮತ್ತು ಕುಟುಂಬದವರ ಹೆಸರುಗಳು ಇಂತಿವೆ: ಯಾಕೋಬನ ಮೊದಲನೆಯ ಮಗ ರೂಬೇನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಜಿಪ್ಟಿಗೆ ಬಂದ ಇಸ್ರಾಯೇಲರ ಮಕ್ಕಳು ಎಂದರೆ, ಯಾಕೋಬನ ಹಾಗೂ ಅವನ ಸಂತತಿಯರ ಹೆಸರುಗಳು: ಯಾಕೋಬನ ಚೊಚ್ಚಲ ಮಗ ರೂಬೇನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:8
15 ತಿಳಿವುಗಳ ಹೋಲಿಕೆ  

“ರೂಬೇನ್ ಕುಲದ ವಿಷಯದಲ್ಲಿ, ‘ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು’ ಎಂದು ಹೇಳಿದನು.


ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”


ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮಕ್ಕಳನ್ನೂ, ತನ್ನ ಮನೆಯವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು.


ರೂಬೇನನ ಮಕ್ಕಳು: ಹನೋಕ್, ಫಲ್ಲೂ, ಹೆಚ್ರೋನ್, ಕರ್ಮೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು