Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್‌ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜೋಸೆಫನು ಫರೋಹನ ಬಳಿಗೆ ಬಂದು, “ನನ್ನ ತಂದೆಯೂ ಸಹೋದರರೂ ದನಕುರಿಗಳನ್ನು ಹಾಗೂ ಎಲ್ಲ ಆಸ್ತಿಪಾಸ್ತಿಯನ್ನು ತೆಗೆದುಕೊಂಡು ಕಾನಾನ್ ನಾಡಿನಿಂದ ಗೋಷೆನ್ ಪ್ರಾಂತ್ಯಕ್ಕೆ ಬಂದಿದ್ದಾರೆ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಯೋಸೇಫನು ಫರೋಹನ ಬಳಿಗೆ ಹೋಗಿ - ನನ್ನ ತಂದೆಯೂ ಅಣ್ಣತಮ್ಮಂದಿರೂ ದನಕುರಿಗಳನ್ನೂ ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿದ್ದಾರೆಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ ನನ್ನ ಸಹೋದರರೂ ಅವರೆಲ್ಲರ ಕುಟುಂಬಗಳವರೂ ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ಎಲ್ಲಾ ಪಶುಗಳನ್ನೂ ಕಾನಾನಿನಲ್ಲಿ ಪಡೆದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಬಂದಿದ್ದಾರೆ. ಈಗ ಅವರು ಗೋಷೆನ್ ಪ್ರಾಂತ್ಯದಲ್ಲಿ ಇದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೋಸೇಫನು ಹೋಗಿ ಫರೋಹನಿಗೆ, “ನನ್ನ ತಂದೆಯೂ, ನನ್ನ ಸಹೋದರರೂ ತಮ್ಮ ಕುರಿದನಗಳನ್ನೂ, ತಮಗಿದ್ದ ಎಲ್ಲವುಗಳನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದಿದ್ದಾರೆ. ಅವರು ಗೋಷೆನ್ ಪ್ರಾಂತದಲ್ಲಿ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:1
8 ತಿಳಿವುಗಳ ಹೋಲಿಕೆ  

ಯೋಸೇಫನು ತನ್ನ ಅಣ್ಣತಮ್ಮಂದಿರನ್ನೂ, ತಂದೆಯ ಮನೆಯವರೆಲ್ಲರನ್ನು ಕುರಿತು “ನಾನು ಹೋಗಿ ಫರೋಹನ ಸನ್ನಿಧಾನದಲ್ಲಿ ನೀವು ಬಂದ ವರ್ತಮಾನವನ್ನು ತಿಳಿಸಿ, ಕಾನಾನ್‌ ದೇಶದಲ್ಲಿದ್ದ ನನ್ನ ಅಣ್ಣತಮ್ಮಂದಿರೂ, ತನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ;


ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.


ಯಾಕೋಬನು ಗೋಷೆನ್ ಸೀಮೆಯ ದಾರಿಯನ್ನು ವಿಚಾರಿಸುವುದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಸೀಮೆಗೆ ಬಂದಾಗ,


ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.


ಇಸ್ರಾಯೇಲರು ವಾಸವಾಗಿದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಆನೆಕಲ್ಲಿನ ಮಳೆ ಬೀಳಲಿಲ್ಲ.


ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ.


“ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು” ಎಂದನು.


ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು