ಆದಿಕಾಂಡ 47:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಜೋಸೆಫನು ಈಜಿಪ್ಟ್ ದೇಶದವರಿಗೂ ಕಾನಾನ್ ನಾಡಿಗರಿಗೂ ದವಸಧಾನ್ಯ ಮಾರಿ ಬಂದ ಹಣದಿಂದ ಫರೋಹನ ಬೊಕ್ಕಸವನ್ನು ತುಂಬಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತದೇಶದಲ್ಲಿಯೂ ಕಾನಾನ್‍ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನೂ ಸೆಳಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈಜಿಪ್ಟ್ ಮತ್ತು ಕಾನಾನ್ ದೇಶಗಳ ಜನರು ಧಾನ್ಯಗಳನ್ನು ಕೊಂಡುಕೊಂಡರು. ಯೋಸೇಫನು ಹಣವನ್ನು ಉಳಿಸಿ ಫರೋಹನ ಭಂಡಾರಕ್ಕೆ ಸೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೋಸೇಫನು ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ, ಅದನ್ನು ಫರೋಹನ ಮನೆಗೆ ತಂದನು. ಅಧ್ಯಾಯವನ್ನು ನೋಡಿ |