Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರು ತಮ್ಮ ಪಶುಪ್ರಾಣಿಗಳನ್ನು ಜೋಸೆಫನ ಬಳಿಗೆ ತಂದರು. ಅವನು ಅವರ ಕುದುರೆಗಳನ್ನೂ ದನಕುರಿಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯ ಕೊಡಿಸಿದನು. ಹೀಗೆ ಆ ವರ್ಷ ಅವರ ಪಶುಪ್ರಾಣಿಗಳನ್ನು ಪಡೆದು, ಧಾನ್ಯಕೊಟ್ಟು ಅವರನ್ನು ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತರಲು ಅವನು ಅವರ ಕುದುರೆಗಳನ್ನೂ ಕುರಿದನಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಡಿಸಿದನು. ಆ ವರುಷದಲ್ಲಿ ಅವರ ದನಕುರಿಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಜನರು ತಮ್ಮ ದನಕರುಗಳನ್ನೂ ಕುದುರೆಗಳನ್ನೂ ಇತರ ಎಲ್ಲಾ ಪಶುಗಳನ್ನೂ ಕೊಟ್ಟು ಆಹಾರವನ್ನು ಕೊಂಡುಕೊಂಡರು. ಆ ವರ್ಷ ಯೋಸೇಫನು ಅವರಿಗೆ ಆಹಾರವನ್ನು ಕೊಟ್ಟು ಅವರ ಪಶುಗಳನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ತಮ್ಮ ಪಶುಗಳನ್ನೆಲ್ಲಾ ಯೋಸೇಫನ ಬಳಿಗೆ ತಂದರು. ಅವುಗಳ ಬದಲಾಗಿ ಅವನು ಆಹಾರ ಧಾನ್ಯ ಕೊಟ್ಟನು. ಅವರ ಕುದುರೆಗಳನ್ನೂ ಕುರಿಗಳನ್ನೂ ಆಡುಗಳನ್ನೂ ದನಗಳನ್ನೂ ಕತ್ತೆಗಳನ್ನೂ ಬದಲಾಗಿ ತೆಗೆದುಕೊಂಡನು. ಆ ವರ್ಷ ಅವರು ಆಹಾರಕ್ಕಾಗಿ ತಮ್ಮ ಎಲ್ಲಾ ಪಶುಪ್ರಾಣಿಗಳನ್ನು ಮಾರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:17
7 ತಿಳಿವುಗಳ ಹೋಲಿಕೆ  

“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.


ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.


ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಲೆ ಕೊಂಡುಕೊಂಡು ಬರುತ್ತಿದ್ದರು.


ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ.


ಅದಕ್ಕೆ ಯೋಸೇಫನು, “ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ” ಎಂದನು.


ಆ ವರ್ಷ ಕಳೆದ ನಂತರ ಅವರು ಎರಡನೆಯ ವರ್ಷದಲ್ಲಿ ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದು ಹೋಗಿದೆ; ನಮ್ಮ ಕುರಿದನಗಳು ಸ್ವಾಮಿಯ ವಶವಾದವು; ಹೀಗಿರುವುದರಿಂದ ನಮ್ಮ ಭೂಮಿಯೂ, ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾಮಿಗೆ ಮರೆಮಾಡದೆ ತಿಳಿಸುತ್ತೇವೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು