Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ವೃದ್ಧಾಪ್ಯದ ನಿಮಿತ್ತ ಯಕೋಬನ ಕಣ್ಣು ಮೊಬ್ಬಾಗಿತ್ತು. ಜೋಸೆಫನು ಆ ಮಕ್ಕಳನ್ನು ಹತ್ತಿರಕ್ಕೆ ತಂದಾಗ ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬುಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಸ್ರೇಲನಿಗೆ ತುಂಬ ವಯಸ್ಸಾಗಿತ್ತು. ಅವನಿಗೆ ಕಣ್ಣು ಸರಿಯಾಗಿ ಕಾಣುತ್ತಿರಲಿಲ್ಲ. ಆದ್ದರಿಂದ ಯೋಸೇಫನು ಅವರನ್ನು ತಂದೆಯ ಬಳಿಗೆ ಕರೆದುಕೊಂಡು ಬಂದನು. ಇಸ್ರೇಲನು ಆ ಹುಡುಗರನ್ನು ಅಪ್ಪಿಕೊಂಡು ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇಸ್ರಾಯೇಲನು ಮುದುಕನಾಗಿದ್ದದ್ದರಿಂದ, ಅವನ ಕಣ್ಣುಗಳು ಕಾಣದಷ್ಟು ಮಬ್ಬಾಗಿದ್ದವು. ಯೋಸೇಫನು ಅವರನ್ನು ಅವನ ಸಮೀಪಕ್ಕೆ ತಂದಾಗ, ಅವನು ಅವರನ್ನು ಮುದ್ದಿಟ್ಟು, ಅಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:10
13 ತಿಳಿವುಗಳ ಹೋಲಿಕೆ  

ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ, “ಆಹಾ, ನನ್ನ ಮಗನ ಸುವಾಸನೆಯು, ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವುದು.


ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು.


ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.


ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.


ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.


ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.


ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಸರಿಯಾಗಿ ಕಾಣಿಸದೆಹೋಗಿದ್ದವು. ಅವನು ಒಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;


ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.


ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು.


ನಂತರ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ, “ಇವರು ಯಾರು?” ಎಂದು ಕೇಳಲು,


ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದನು.


ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.


ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು