Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವುದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತನ್ನ ತಂದೆ ಬಲಗೈಯನ್ನು ಎಫ್ರಯಿಮನ ತಲೆಯ ಮೇಲೆ ಇಟ್ಟದ್ದು ಜೋಸೆಫನಿಗೆ ಹಿಡಿಸಲಿಲ್ಲ. ಅವನು ಆ ಕೈಯನ್ನು ಹಿಡಿದು ಎಫ್ರಯಿಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವಂತೆ ತಂದೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವದಕ್ಕಾಗಿ ಹಿಡಿದು ತಂದೆಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಸ್ರೇಲನು ತನ್ನ ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲಿಟ್ಟಿದ್ದರಿಂದ ಯೋಸೇಫನು ಅಸಮಾಧಾನದಿಂದ ನೋಡಿ ತಂದೆಯ ಕೈಯನ್ನು ಹಿಡಿದುಕೊಂಡನು; ಅಲ್ಲದೆ ತಂದೆಯ ಕೈಯನ್ನು ಎಫ್ರಾಯೀಮನ ತಲೆಯ ಮೇಲಿಂದ ತೆಗೆದುಕೊಂಡು ಮನಸ್ಸೆಯ ತಲೆಯ ಮೇಲೆ ಇಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ತನ್ನ ತಂದೆಯು ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನು ಇಟ್ಟದ್ದನ್ನು ಯೋಸೇಫನು ಕಂಡಾಗ, ಅದು ಅವನಿಗೆ ಇಷ್ಟವಾಗಿರಲಿಲ್ಲ. ಆದ್ದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು, ಎಫ್ರಾಯೀಮನ ತಲೆಯ ಮೇಲಿಂದ ತೆಗೆದು, ಮನಸ್ಸೆಯ ತಲೆಯ ಮೇಲೆ ಇಡುವುದರಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:17
13 ತಿಳಿವುಗಳ ಹೋಲಿಕೆ  

ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು.


ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.


ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು, ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು.


ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು.


ಒಮ್ರಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನಾಗಿದ್ದನು.


ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.


ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ಹೋಗುತ್ತೇನೆ” ಎಂದನು.


ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.


ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು.


ಕಾನಾನ್ಯರ ಹೆಣ್ಣು ಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ಏಸಾವನು ತಿಳಿದುಕೊಂಡನು.


ಯೋಸೇಫನು ತಂದೆಗೆ, “ಅಪ್ಪಾ, ಇವನೇ ಚೊಚ್ಚಲ ಮಗನು ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು” ಎಂದು ಹೇಳಿದನು.


ಯೋಸೇಫನ ಚೊಚ್ಚಲ ಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವತ್ತಿನ ವಿವರ: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾಗಿದ್ದನು. ಆದ್ದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಸಿಕ್ಕಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು