ಆದಿಕಾಂಡ 48:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೆ ತಂದೆ ಅದಕ್ಕೆ ಒಪ್ಪದೆ, “ಗೊತ್ತು ಮಗನೇ, ನನಗೆ ಗೊತ್ತು; ಇವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವುದು; ಇವನೂ ಬಲಿಷ್ಠನಾಗುವನು. ಅವನಿಂದ ರಾಷ್ಟ್ರಗಳ ಸಮೂಹವೆ ಉತ್ಪತ್ತಿಯಾಗುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದರೆ ಅವನ ತಂದೆ ಒಪ್ಪದೆ - ಮಗನೇ, ನಾನು ಬಲ್ಲೆ, ಬಲ್ಲೆ; ಇವನಿಂದಲೂ ಜನಾಂಗವುಂಟಾಗುವದು; ಇವನೂ ಬಲಿಷ್ಠನಾಗುವನು; ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು; ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅದಕ್ಕೆ ಅವನ ತಂದೆಯು, “ನನಗೆ ಗೊತ್ತು ಮಗನೇ, ನನಗೆ ಗೊತ್ತು. ಮನಸ್ಸೆ ಮೊದಲು ಹುಟ್ಟಿದವನು. ಅವನು ಮಹಾವ್ಯಕ್ತಿಯಾಗುವನು. ಅವನು ಅನೇಕ ಜನರಿಗೆ ತಂದೆಯಾಗುವನು. ಆದರೆ ತಮ್ಮನು ಅಣ್ಣನಿಗಿಂತ ಮಹಾವ್ಯಕ್ತಿಯಾಗುವನು. ಅವನ ಕುಟುಂಬವು ತುಂಬ ದೊಡ್ಡದಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅದಕ್ಕೆ ಅವನ ತಂದೆಯು ಒಪ್ಪದೆ, “ನನಗೆ ಗೊತ್ತು. ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವುದಲ್ಲದೆ ಅವನು ದೊಡ್ಡವನಾಗುವನು. ಆದರೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತತಿಯು ಜನಾಂಗಗಳ ಸಮೂಹವಾಗುವುದು,” ಎಂದನು. ಅಧ್ಯಾಯವನ್ನು ನೋಡಿ |