ಆದಿಕಾಂಡ 49:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು. ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕಟ್ಟುವನು ತನ್ನ ವಾಹನಪಶುವನು ದ್ರಾಕ್ಷಾಲತೆಗೆ ಬಿಗಿಯುವನು ತನ್ನ ಹೇಸರಕತ್ತೆಯನು ರಾಜದ್ರಾಕ್ಷೆಗೆ ಒಗೆಯುವನು ತನ್ನ ಬಟ್ಟೆಯನು ದ್ರಾಕ್ಷಾರಸದಲಿ ತೊಳೆವನು ಮೇಲಂಗಿಯನು ಆ ರಕ್ತಗೆಂಪು ರಸದಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನು ತನ್ನ ವಾಹನಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು, ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಬಟ್ಟೆಗಳನ್ನು ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನು ತನ್ನ ವಾಹನ ಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು. ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು. ದ್ರಾಕ್ಷಾರಸದಲ್ಲಿ ತನ್ನ ಬಟ್ಟೆ ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು. ಅಧ್ಯಾಯವನ್ನು ನೋಡಿ |
ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.