Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಕೋಬನ ಮಕ್ಕಳೇ, ನೀವೆಲ್ಲರೂ ಕೂಡಿ ಬಂದು ಕೇಳಿರಿ. ನಿಮ್ಮ ತಂದೆಯಾದ ಇಸ್ರಾಯೇಲನ ಮಾತನ್ನು ಲಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯಕೋಬನ ಮಕ್ಕಳೇ, ಕೂಡಿಬಂದು ಕೇಳಿ ನೀವೆಲ್ಲರು ಆಲಿಸಿ ನಿಮ್ಮ ತಂದೆ ಇಸ್ರಯೇಲನ ಮಾತನ್ನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಕೋಬನ ಮಕ್ಕಳೇ, ನೀವೆಲ್ಲರೂ ಕೂಡಿಬಂದು ಕೇಳಿರಿ; ನಿಮ್ಮ ತಂದೆಯಾದ ಇಸ್ರಾಯೇಲನ ಮಾತನ್ನು ಲಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯಾಕೋಬನ ಗಂಡುಮಕ್ಕಳೇ, ಒಟ್ಟಾಗಿ ಬಂದು ಕೇಳಿರಿ. ನಿಮ್ಮ ತಂದೆಯಾದ ಇಸ್ರೇಲನು ಹೇಳುವುದನ್ನು ಕೇಳಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯಾಕೋಬನ ಪುತ್ರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ, ನಿಮ್ಮ ತಂದೆ ಇಸ್ರಾಯೇಲನ ಮಾತಿಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:2
13 ತಿಳಿವುಗಳ ಹೋಲಿಕೆ  

ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.


ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.


ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.


ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.


ಈಗ, ಮಕ್ಕಳೇ, ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.


ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ, ನನ್ನ ಆಜ್ಞೆಗಳನ್ನು ನಿಧಿಯಂತೆ ಕಾಪಾಡಿಕೋ.


ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ.


ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು.


ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ, ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.


ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?


ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು