Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬಿಲ್ಲುಗಾರರು ಅವನನ್ನು ಆಕ್ರಮಿಸುವರು, ಹಗೆತನದಿಂದ ಬಾಣವನ್ನು ಅವನ ಮೇಲೆ ಪ್ರಯೋಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಬಿಲ್ಲುಗಾರರೆಸಗಿದರು ಅವನ ಮೇಲೆ ಆಕ್ರಮಣ ಸುತ್ತುವರೆದರವನನು ಎಸೆದು ಬಿರುಸುಬಾಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬಿಲ್ಲುಗಾರರು ಬಂದು ಅವನನ್ನು ಕೆಣಕಿ ಬಾಣ ಎಸೆದು ಕವಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅನೇಕ ಜನರು ಅವನ ವಿರುದ್ಧವಾಗಿ ಹೋರಾಡಿದರು. ಬಿಲ್ಲುಗಳನ್ನು ಹೊಂದಿದ್ದ ಜನರು ಅವನನ್ನು ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಸಿಟ್ಟಿನಿಂದ ಬಿಲ್ಲುಗಾರರು ಅವನ ಮೇಲೆ ಬೀಳುವರು. ವಿರೋಧದಿಂದ ಅವನ ಮೇಲೆ ಬಾಣಗಳನ್ನು ಎಸೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:23
12 ತಿಳಿವುಗಳ ಹೋಲಿಕೆ  

ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.


ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.


ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ; ಆದರೆ ಯೆಹೋವನು ನನಗೆ ಸಹಾಯ ಮಾಡಿದನು.


ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.


ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವುದಕ್ಕೆ ಒಳಸಂಚು ಮಾಡಿಕೊಂಡರು.


ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು.


ಯೋಸೇಫನು ಫಲಭರಿತವಾದ ವೃಕ್ಷವು, ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ. ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ.


ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು