ಆದಿಕಾಂಡ 49:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಿನ್ನ ತಂದೆಯ ದೇವರು ನಿನಗೆ ಸಹಾಯ ಹಸ್ತವಾಗಿದ್ದಾನೆ. ನಿನ್ನ ತಂದೆಯ ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು, ಆತನು ಮೇಲಣ ಆಕಾಶದಿಂದಲೂ, ಕೆಳಗಣ ಸಾಗರದ ಸೆಲೆಗಳಿಂದಲೂ, ಸ್ತನದಿಂದಲೂ, ಗರ್ಭಫಲದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹೀಗಾಯಿತು ನಿನ್ನ ತ0ದೆಯ ದೇವರಿ0ದ ಸಿಗಲಿ ನಿನಗಾತನ ಸಹಾಯ ಹೀಗಾಯಿತು ಸರ್ವವಲ್ಲಭ ದೇವರಿ0ದ. ದೊರಕಲಿ ನಿನಗಾತನ ಆಶೀರ್ವಾದ. ಮೇಲಣ ಆಕಾಶದಿ0ದ, ಕೆಳಗಣ ಸಾಗರ ಸೆಲೆಗಳಿ0ದ ಸ್ತನ್ಯದಿ0ದ, ಗರ್ಭದಿ0ದ, ಆತ ನೀಡುವ ವರದಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇದು ನಿನ್ನ ತಂದೆಯ ದೇವರಿಂದಾಯಿತು, ಆತನು ನಿನಗೆ ಸಹಾಯ ಮಾಡಲಿ; ಸರ್ವಶಕ್ತನಾದ ದೇವರಿಂದಾಯಿತು,ಅತನು ನಿನ್ನನ್ನು ಆಶೀರ್ವದಿಸಲಿ. ಆತನು ಮೇಲಣ ಆಕಾಶದಿಂದಲೂ ಕೆಳಗಣ ಸಾಗರದ ಸೆಲೆಗಳಿಂದಲೂ ಸ್ತನ್ಯದಿಂದಲೂ ಗರ್ಭದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಿಮ್ಮ ತಂದೆಯ ದೇವರಿಂದಲೂ ಪಡೆದುಕೊಳ್ಳುವನು. ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆತನು ಮೇಲಿರುವ ಆಕಾಶದಿಂದ ನಿನಗೆ ಆಶೀರ್ವಾದಗಳನ್ನು ಕೊಡಲಿ. ಆತನು ಕೆಳಗಿನ ಆಳವಾದ ಸಾಗರದ ಸೆಲೆಗಳಿಂದಲೂ ನಿನಗೆ ಆಶೀರ್ವಾದಗಳನ್ನು ಕೊಡಲಿ. ಆತನು ನಿನಗೆ ಸ್ತನ್ಯಗಳಿಂದಲೂ ಗರ್ಭದಿಂದಲೂ ಆಶೀರ್ವಾದಗಳನ್ನು ಕೊಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇದಕ್ಕೆ ಕಾರಣ ನಿನಗೆ ಸಹಾಯ ಮಾಡುವ ನಿನ್ನ ಪಿತೃಗಳ ದೇವರು; ನಿನ್ನನ್ನು ಸರ್ವಶಕ್ತರಾದ ದೇವರು ಆಶೀರ್ವದಿಸಲಿ. ಆ ಆಶೀರ್ವಾದಗಳು ಪರಲೋಕದವುಗಳು. ಆ ಆಶೀರ್ವಾದಗಳು ಕೆಳಗಿನಾಳದಲ್ಲಿರುವವುಗಳು. ಅವು ಎದೆಯ ಹಾಗೂ ಗರ್ಭದ ಆಶೀರ್ವಾದಗಳು. ಅಧ್ಯಾಯವನ್ನು ನೋಡಿ |