Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪ್ರಾಚೀನ ಪರ್ವತಗಳಿಗಿ0ತ, ಚಿರಸ್ಥಾಯಿ ಗುಡ್ಡಗಳಿಗಿಂತ ಉತ್ತಮೋತ್ತಮ ನಿನ್ನ ತಂದೆಯಿಂದ ಬರುವ ಆಶೀರ್ವಾದ. ಇಳಿದು ಬರಲೀ ವರದಾನಗಳು ಜೋಸೆಫನ ಮೇಲೆ ಸೋದರರಿಂದ ಬೇರ್ಪಟ್ಟವನ ಶಿರಸ್ಸಿನ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿನ್ನ ತಂದೆಯ ಆಶೀರ್ವಾದಗಳು ಆದಿಯಿಂದಿದ್ದ ಪರ್ವತಗಳಿಂದುಟಾಗುವ ಮೇಲುಗಳಿಗಿಂತಲೂ ಸದಾಕಾಲವಾಗಿರುವ ಬೆಟ್ಟಗಳಿಂದುಂಟಾಗುವ ಉತ್ತಮ ವಸ್ತುಗಳಿಗಿಂತಲೂ ವಿಶೇಷವಾಗಿವೆ. ಇವೆಲ್ಲಾ ಯೋಸೇಫನ ಪಾಲಿಗೆ ಬರಲಿ; ಅಣ್ಣತಮ್ಮಂದಿರಲ್ಲಿ ಪ್ರಭುವಾಗಿರುವವನ ಶಿರಸ್ಸಿನ ಮೇಲುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನನ್ನ ತಂದೆತಾಯಿಗಳಿಗೆ ಅನೇಕಾನೇಕ ಒಳ್ಳೆಯ ಸಂಗತಿಗಳು ಸಂಭವಿಸಿದವು. ನಿನ್ನ ತಂದೆಯಾದ ನಾನು ಅದಕ್ಕಿಂತಲೂ ಹೆಚ್ಚು ಆಶೀರ್ವಾದ ಹೊಂದಿಕೊಂಡೆನು. ನಿನ್ನ ಸಹೋದರರು ನಿನ್ನನ್ನು ದೂರಮಾಡಲು ಪ್ರಯತ್ನಿಸಿದರು. ಆದರೆ ಈಗ ನನ್ನ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಎತ್ತರವಾದ ಬೆಟ್ಟದೋಪಾದಿಯಲ್ಲಿ ರಾಶಿಯಂತಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಪುರಾತನ ಪರ್ವತಗಳ ಆಶೀರ್ವಾದಗಳಿಗಿಂತ ನಿನ್ನ ತಂದೆಯ ಆಶೀರ್ವಾದಗಳು ಶ್ರೇಷ್ಠವಾದವುಗಳು. ಅವು ಪುರಾತನ ಶಿಖರಗಳ ಐಶ್ವರ್ಯಕ್ಕಿಂತ ಹೆಚ್ಚಿನವುಗಳು. ಇವೆಲ್ಲವೂ ಯೋಸೇಫನ ತಲೆಯ ಮೇಲೆ ಅಂದರೆ, ತನ್ನ ಸಹೋದರರಲ್ಲಿ ರಾಜಕುಮಾರನಾದವನ ಹಣೆಯ ಮೇಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:26
18 ತಿಳಿವುಗಳ ಹೋಲಿಕೆ  

ಆತನು ನಿಂತುಕೊಳ್ಳಲು ಭೂಮಿಯು ಅಳೆದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು.


ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”


ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,


ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.


ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.


“ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,


ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.


“ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿನ್ನುತ್ತಾನೆ. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು