ಆದಿಕಾಂಡ 49:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಇದೇ ಅವರ ತಂದೆ ಅವರಿಗೆ ಹೇಳಿದ ಆಶೀರ್ವಾದ. ಒಂದೊಂದು ಕುಲಕ್ಕೆ ಒಂದೊಂದು ಆಶೀರ್ವಚನವನ್ನು ನುಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಇವು ಇಸ್ರೇಲನ ಹನ್ನೆರಡು ಕುಲಗಳು. ಈ ವಿಷಯಗಳನ್ನೆಲ್ಲ ಅವರ ತಂದೆಯಾದ ಇಸ್ರೇಲನು ಅವರಿಗೆ ಹೇಳಿದನು. ಅವನು ತನ್ನ ಪ್ರತಿಯೊಬ್ಬ ಗಂಡುಮಗನಿಗೆ ಸರಿತಕ್ಕ ಆಶೀರ್ವಾದ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಇವರೆಲ್ಲಾ ಇಸ್ರಾಯೇಲಿನ ಹನ್ನೆರಡು ಗೋತ್ರಗಳು. ಅವರ ತಂದೆ ಅವರಿಗೆ ಹೇಳಿದ್ದೂ ಇದೇ. ಅವನು ಒಬ್ಬೊಬ್ಬನನ್ನೂ ಅವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿ |
ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.