Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ, ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ರೂಬೇನನೇ, ನೀನೆನ್ನ ಜೇಷ್ಠಪುತ್ರನು ನನ್ನ ಚೈತನ್ಯಸ್ವರೂಪನು, ನನ್ನ ವೀರ್ಯದ ಪ್ರಥಮ ಫಲ ನೀನು ಹಿರಿಮೆಯಲು, ಒಲುಮೆಯಲು ಪ್ರಮುಖನೆನಿಸಿಕೊಳ್ಳುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ ನನ್ನ ವೀರ್ಯಕ್ಕೆ ಪ್ರಥಮ ಫಲವೂ ಗೌರವದಲ್ಲಿಯೂ ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ರೂಬೇನನೇ, ನೀನು ನನ್ನ ಚೊಚ್ಚಲು ಮಗ. ನೀನೇ ನನ್ನ ಮೊದಲನೆಯ ಮಗ. ನೀನು ನನ್ನ ಇತರ ಎಲ್ಲಾ ಗಂಡುಮಕ್ಕಳಿಗಿಂತ ಶಕ್ತಿಶಾಲಿಯೂ ಗೌರವಯುತನೂ ಆಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ರೂಬೇನನೇ, ನೀನು ನನ್ನ ಜೇಷ್ಠಪುತ್ರನು. ನನ್ನ ಶಕ್ತಿ, ನನ್ನ ಬಲದ ಸಂಕೇತವೂ, ಗೌರವದಲ್ಲಿ ಶಕ್ತಿಯಲ್ಲಿ ಮಿತಿಮೀರಿದವನೂ ಆಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:3
17 ತಿಳಿವುಗಳ ಹೋಲಿಕೆ  

ಹಾಮನ ವಂಶದವರ ಪ್ರಥಮಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.


ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.


ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ, ಚೊಚ್ಚಲ ಮಕ್ಕಳನ್ನು ಸಂಹರಿಸಿದನು.


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”


ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.


ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.


ಇಸ್ರಾಯೇಲನ ಮಕ್ಕಳು ಯಾರೆಂದರೆ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,


ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.


ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,


ಯೋಸೇಫನು ತಂದೆಗೆ, “ಅಪ್ಪಾ, ಇವನೇ ಚೊಚ್ಚಲ ಮಗನು ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು” ಎಂದು ಹೇಳಿದನು.


ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೇನನು.


“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ ‘ಆಮೆನ್’ ಎಂಬಾತನು ಹೇಳುವುದೇನಂದರೆ,


“ರೂಬೇನ್ ಕುಲದ ವಿಷಯದಲ್ಲಿ, ‘ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು’ ಎಂದು ಹೇಳಿದನು.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.


ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.


ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.


ಎಫ್ರಾಯೀಮಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ರೂಬೇನಿಗೆ ಒಂದು ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು