ಆದಿಕಾಂಡ 49:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನನ್ನ ಮನವೇ, ಒಳಗಾಗಬೇಡ ಅವರ ದುರಾಲೋಚನೆಗೆ ನನ್ನ ಪ್ರಾಣವೇ, ಸೇರಬೇಡ ನೀನವರ ಗುಂಪಿಗೆ ಕೊಂದರವರು ನರರನು ಕೋಪೋದ್ರೇಕದಿಂದ ಊನಪಡಿಸಿದರು ಎತ್ತುಗಳನ್ನು ಮದದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನನ್ನ ಪ್ರಾಣವೇ, ಅವರ ಗುಪ್ತವಾದ ದುರಾಲೋಚನೆಗೆ ನೀನು ಒಳಪಡಬಾರದು; ನನ್ನ ಮನವೇ, ಅವರ ಗುಂಪಿಗೆ ನೀನು ಸೇರಬೇಡ. ಅವರು ಕೋಪೋದ್ರೇಕದಿಂದ ಮನುಷ್ಯರನ್ನು ಸಂಹರಿಸಿದರು; ಮದದಿಂದ ಎತ್ತುಗಳನ್ನು ಊನಪಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವರು ಗುಟ್ಟಾಗಿ ಕೆಟ್ಟಕಾರ್ಯಗಳನ್ನು ಯೋಚಿಸಿದರು. ಅವರ ರಹಸ್ಯಕೂಟಗಳನ್ನು ನನ್ನ ಆತ್ಮವು ಸ್ವೀಕರಿಸುವುದಿಲ್ಲ. ಅವರು ಕೋಪಗೊಂಡಾಗ ಗಂಡಸರನ್ನು ಕೊಂದುಹಾಕಿದರು. ಅವರು ಮೋಜಿಗೆಂದೇ ಪ್ರಾಣಿಗಳನ್ನು ಹಿಂಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನನ್ನ ಮನವೇ, ಅವರ ಆಲೋಚನೆಗೆ ಒಳಪಡಬೇಡ. ನನ್ನ ಪ್ರಾಣವೇ, ಅವರ ಕೂಟಗಳಲ್ಲಿ ಸೇರಬೇಡ. ಅವರು ತಮ್ಮ ಕೋಪದಲ್ಲಿ ಮನುಷ್ಯರನ್ನು ಕೊಂದರು, ಮದದಿಂದ ಎತ್ತುಗಳನ್ನು ಊನಪಡಿಸಿದರು. ಅಧ್ಯಾಯವನ್ನು ನೋಡಿ |