Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೆಹೂದನೇ, ವಂದಿಸುವರು ನಿನ್ನನು ಸಹೋದರರು ನಿನ್ನ ಕೈಯಲ್ಲಿರುವುದು ಶತ್ರುಗಳ ಕುತ್ತಿಗೆಯು ಎರಗುವರು ನಿನಗೆ ನಿನ್ನ ಅಣ್ಣತಮ್ಮಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು; ನಿನ್ನ ಸಹೋದರರು ನಿನಗೇ ಎರಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಯೆಹೂದನೇ, ನಿನ್ನ ಸಹೋದರರು ನಿನ್ನನ್ನೇ ಹೊಗಳುವರು. ನೀನು ನಿನ್ನ ವೈರಿಗಳನ್ನು ಸೋಲಿಸುವೆ. ನಿನ್ನ ಸಹೋದರರು ನಿನಗೇ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:8
38 ತಿಳಿವುಗಳ ಹೋಲಿಕೆ  

ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.


ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.


ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.


ಅವರನ್ನು ತನ್ನ ಬಳಿಗೆ ತಂದನಂತರ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ “ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ” ಎಂದು ಹೇಳಿದನು. ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.


“ಯೆಹೂದ ಕುಲದ ವಿಷಯದಲ್ಲಿ, ‘ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು’” ಎಂದು ಹೇಳಿದನು.


ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು” ಎಂದು ಹೇಳಿ ಅದಕ್ಕೆ “ಯೆಹೂದಾ” ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.


ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು.


ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.


ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.


ಅವನು ಯೆಹೂದದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ರ ಪಟ್ಟಣಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿದನು.


ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.


ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯ ಸೈನಿಕರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ ಸೈನಿಕರೂ ಇದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.


ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ.


ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ. ನನ್ನ ಶತ್ರುಗಳನ್ನು ನಿರ್ಮೂಲ ಮಾಡುವೆನು.


ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.


ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು.


ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ.


ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.


ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 74,600 ಮಂದಿ.


ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್, ಜೆರಹ. ಇವರಲ್ಲಿ ಏರ್, ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತು ಹೋಗಿದ್ದರು. ಪೆರೆಚನ ಮಕ್ಕಳು: ಹೆಚ್ರೋನ್, ಹಾಮೂಲ್.


ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.


ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ: ಶೇಲಹನ ವಂಶಸ್ಥರಾದ ಶೇಲಾನ್ಯರು, ಪೆರೆಹನ ವಂಶಸ್ಥರಾದ ಪೆರೆಚ್ಯರು, ಜೆರಹನ ವಂಶಸ್ಥರಾದ ಜೆರಹಿಯರು ಇವರೇ.


ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು.


ಯೆಹೂದದ ಕುಲಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ವಿವರ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು