ಆದಿಕಾಂಡ 5:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಪ್ರಭು ಶಪಿಸಿದ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಪಡುವ ಶ್ರಮೆಯಲ್ಲಿ ಈ ಮಗನು ಉಪಶಮನ ತರುವನು ಎಂದುಕೊಂಡು ಅವನಿಗೆ ನೋಹ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯೆಹೋವನು ಶಪಿಸಿದ ಭೂವಿುಯಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಶ್ರಮೆಯಲ್ಲಿಯೂ ಈ ಮಗನು ನಮ್ಮನ್ನು ಉಪಶಮನಗೊಳಿಸುವನು ಎಂದು ಹೇಳಿ ಅವನಿಗೆ ನೋಹ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕೆಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಈ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಆ ಮಗುವಿಗೆ ನೋಹ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವನಿಗೆ, ನೋಹ ಎಂದು ಹೆಸರಿಟ್ಟು, “ಯೆಹೋವ ದೇವರು ಶಪಿಸಿದ ಭೂಮಿಯಿಂದ ನಮಗೆ ಉಂಟಾದ ಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಉಪಶಮನಗೊಳಿಸುವನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |