Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದಾಮನು ಒಟ್ಟು ಒಂಭೈನೂರ ಮೂವತ್ತು ವರ್ಷ ಬದುಕಿ ನಂತರ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸತ್ತಾಗ ಅವನಿಗೆ 930 ವರ್ಷಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಒಟ್ಟು ಒಂಭೈನೂರ ಮೂವತ್ತು ವರುಷ ಬದುಕಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹೀಗೆ ಆದಾಮನು ಒಟ್ಟು 930 ವರ್ಷ ಜೀವಿಸಿ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದಾಮನು ಒಟ್ಟು ಒಂಬೈನೂರ ಮೂವತ್ತು ವರುಷ ಬದುಕಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:5
21 ತಿಳಿವುಗಳ ಹೋಲಿಕೆ  

ಎನೋಷನು ಒಟ್ಟು ಒಂಭೈನೂರ ಐದು ವರ್ಷ ಬದುಕಿ ನಂತರ ಸತ್ತನು.


ಸೇತನು ಒಟ್ಟು ಒಂಭೈನೂರ ಹನ್ನೆರಡು ವರ್ಷ ಬದುಕಿ ನಂತರ ಸತ್ತನು.


ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.


ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.


ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.


ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.


ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.


ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? ಸೆಲಾ


ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.


ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.


ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.


ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರ್ಷ ಬದುಕಿದನು.


ಸೇತನು ನೂರ ಐದು ವರ್ಷದವನಾದಾಗ, ಎನೋಷನನ್ನು ಪಡೆದನು.


ಆದಾಮನ ಸಂತಾನದವರು; ಸೇತ್, ಎನೋಷ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು