Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಜೋಸೆಫನು ತನ್ನ ತಂದೆಯ ಶವದ ಮೇಲೆ ಬಿದ್ದು, ಕಣ್ಣೀರು ಇಡುತ್ತಾ, ಅವರಿಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲನು ಸತ್ತಾಗ ಯೋಸೇಫನು ತುಂಬ ದುಃಖಿಸಿದನು. ಅವನು ತನ್ನ ತಂದೆಯನ್ನು ಅಪ್ಪಿಕೊಂಡು ಗೋಳಾಡಿ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಯೋಸೇಫನು ತನ್ನ ತಂದೆಯ ಶವದ ಮೇಲೆ ಬಿದ್ದು, ಅವನಿಗಾಗಿ ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:1
11 ತಿಳಿವುಗಳ ಹೋಲಿಕೆ  

ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತೈಸುವನು” ಎಂದು ಹೇಳಿದನು.


ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.


ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.


ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.


ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ” ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.


ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.


ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.


ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು