Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದುದರಿಂದ ನೀವು ಸ್ವಲ್ಪವೂ ಸಂಕೋಚಪಡಬೇಕಾಗಿಲ್ಲ. ನಾನು ನಿಮ್ಮನ್ನೂ ನಿಮಗೆ ಸೇರಿದ ಎಲ್ಲರನ್ನೂ ಪೋಷಿಸುತ್ತೇನೆ,” ಎಂದು ಹೇಳಿ ಅವರನ್ನು ಸಂತೈಸಿ, ಅವರ ಸಂಗಡ ಪ್ರೀತಿಯಿಂದ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ; ನಾನು ನಿಮ್ಮನ್ನೂ ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ಭಯಪಡದಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಪೋಷಿಸುತ್ತೇನೆ” ಎಂದು ಹೇಳಿದನು. ಯೋಸೇಫನು ತನ್ನ ಸಹೋದರರೊಂದಿಗೆ ಸೌಮ್ಯವಾಗಿ ಮಾತನಾಡಿದ್ದರಿಂದ ಅವರಿಗೆ ತುಂಬ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗಿರುವುದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ,” ಎಂದು ಹೇಳಿ, ಅವರನ್ನು ಸಂತೈಸಿ, ದಯೆಯಿಂದ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:21
13 ತಿಳಿವುಗಳ ಹೋಲಿಕೆ  

ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.


ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.


ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.


ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.


ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.


ಹೀಗೆ ಯೋಸೇಫನು, ಅವನ ತಂದೆಯ ಮನೆಯವರೂ ಐಗುಪ್ತ ದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.


ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತನಾಡಿಸಿ ತಿರುಗಿ ಮನೆಗೆ ಕರೆದುಕೊಂಡು ಹೋಗಬೇಕೆಂದು ಒಬ್ಬ ಸೇವಕನನ್ನೂ, ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆಯು ಅವನನ್ನು ತನ್ನ ತವರುಮನೆಯಲ್ಲಿ ಸೇರಿಸಿಕೊಂಡಳು; ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.


ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.


ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು