Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಸರ್ವೇಶ್ವರ ಸ್ಸ್ವಾಮಿ, “ನನ್ನ ಆತ್ಮವು ಮನುಷ್ಯನಿಗೆ ಶಾಶ್ವತವಾಗಿ ಹೊಣೆಯಾಗಿರಲಾರದು. ಭ್ರಷ್ಟರಾದ ಅವರು ಮರ್ತ್ಯರು. ಅವರ ಆಯುಷ್ಯ ಕೇವಲ ನೂರಿಪ್ಪತ್ತು ವರ್ಷ ಇರಲಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆಹೋವನು - ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿರುವದಿಲ್ಲ; ಅವರು ಭ್ರಷ್ಟರಾದದರಿಂದ ಮರ್ತ್ಯರೇ. ಅವರ ಆಯುಷ್ಯವು ನೂರ ಇಪ್ಪತ್ತು ವರುಷವಾಗಿರಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರು, “ನನ್ನ ಆತ್ಮವು ಮನುಷ್ಯರಲ್ಲಿ ನಿತ್ಯವಾಗಿ ಇರುವುದಿಲ್ಲ. ಏಕೆಂದರೆ ಅವರು ಮರ್ತ್ಯರೇ. ಆದರೂ ಅವರ ಆಯುಷ್ಯವು ನೂರ ಇಪ್ಪತ್ತು ವರ್ಷಗಳಾಗಿರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:3
17 ತಿಳಿವುಗಳ ಹೋಲಿಕೆ  

ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.


ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಅವರು ಮಾಂಸಮಾತ್ರದವರೂ, ಶ್ವಾಸವನ್ನು ತಿರುಗಿ ಪಡೆಯದವರಾಗಿದ್ದಾರೆ ಎಂಬುದನ್ನು ನೆನಪುಮಾಡಿಕೊಳ್ಳುತ್ತಿದ್ದನು.


“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”


ಪವಿತ್ರಾತ್ಮನನ್ನು ನಂದಿಸಬೇಡಿ,


ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.


ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?


ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.


ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.


ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು