Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದನ್ನು ಕಂಡ ಸರ್ವೇಶ್ವರ ಮನುಜನನ್ನು ಇಲ್ಲಿ ಸೃಷ್ಟಿಮಾಡಿದ್ದಕ್ಕಾಗಿ ವ್ಯಥೆಪಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ನೋಡಿ ತಾನು ಭೂವಿುಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ಪಶ್ಚಾತ್ತಾಪಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಭೂಮಿಯ ಮೇಲೆ ತಾನು ಮನುಷ್ಯರನ್ನು ಸೃಷ್ಟಿಸಿದ್ದಕ್ಕಾಗಿ ಯೆಹೋವನು ದುಃಖಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ನಿಟ್ಟುಸಿರುಬಿಟ್ಟು, ತಮ್ಮ ಹೃದಯದಲ್ಲಿ ನೊಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:6
34 ತಿಳಿವುಗಳ ಹೋಲಿಕೆ  

ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವನಿಗೆ ಮೊರೆಯಿಟ್ಟನು.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ.


ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು.


ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.


ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.


ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.


ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಸಮುವೇಲನು ಜೀವದಿಂದ ಇರುವವರೆಗೂ ಸೌಲನನ್ನು ನೋಡಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ವಿಷಾದಪಟ್ಟನು. ಸಮುವೇಲನು ಅವನ ಕುರಿತು ದುಃಖಪಡುತ್ತಿದ್ದನು.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.


“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.


ನಿನ್ನ ನುಡಿಯನ್ನು ಕೈಗೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.


“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.


ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.


ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!


ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.


ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.


ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.


ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕಿತ್ತು, ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು