ಆದಿಕಾಂಡ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೋಹನ ಜೀವಮಾನದ ಆರುನೂರನೆಯ ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನ ಭೂಮಿಯ ಅಡಿಸಾಗರದ ಸೆಲೆಗಳು ಒಡೆದವು. ಆಕಾಶದ ತೂಬುಗಳು ತೆರೆದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂವಿುಯ ಕೆಳಗಿರುವ ಸಾಗರದ ಸೆಲೆಗಳು ಒಡೆದವು; ಆಕಾಶದ ತೂಬುಗಳು ತೆರೆದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11-13 ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೋಹನ ಜೀವನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾಸಾಗರದ ಸೆಲೆಗಳು ಒಡೆದವು. ಆಕಾಶದ ಪ್ರವಾಹದ ದ್ವಾರಗಳು ತೆರೆದವು. ಅಧ್ಯಾಯವನ್ನು ನೋಡಿ |