Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದೇ ದಿನ ನೋಹನೂ ಅವನ ಹೆಂಡತಿಯೂ ಮತ್ತು ಶೇಮ್, ಹಾಮ್, ಯೆಫೆತ್ ಎಂಬ ಅವನ ಮಕ್ಕಳೂ ಅವರ ಮಡದಿಯರೂ ನಾವೆಯನ್ನು ಹೊಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳೂ ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದೇ ದಿನದಲ್ಲಿ ನೋಹನು ಮತ್ತು ಅವನ ಪುತ್ರರಾದ ಶೇಮ್, ಹಾಮ್, ಯೆಫೆತ್ ಇವರೂ ನೋಹನ ಹೆಂಡತಿಯೂ ಅವನ ಪುತ್ರರ ಹೆಂಡತಿಯರೂ ನಾವೆಯನ್ನು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:13
16 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.


“ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.


ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು.


ಹಾಮನ ಸಂತಾನದವರು ಯಾರೆಂದರೆ - ಕೂಷ್, ಮಿಚ್ರಯಿಮ್, ಪೂತ್, ಕಾನಾನ್ ಎಂಬುವವರು.


ನೋಹನು ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.


ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.


ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ


ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿ ಒಣಗಿತ್ತು.


ಅವರ ತಂದೆಗಳೂ, ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು