Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಈ ಕಾರಣ ಭೂಮಿಯ ಮೇಲೆ ಸಂಚರಿಸುತ್ತಿದ್ದ ಎಲ್ಲ ಪ್ರಾಣಿಗಳು, ಕಾಡುಮೃಗಗಳು, ಸಾಕುಪ್ರಾಣಿಗಳು, ಕ್ರಿಮಿಕೀಟಗಳು, ಮನುಷ್ಯರು ಸಹಿತವಾಗಿ ನಾಶವಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪಶುಪಕ್ಷಿ ಮೃಗಕ್ರಿವಿುಗಳು ಮನುಷ್ಯರು ಸಹಿತವಾಗಿ ಭೂವಿುಯ ಮೇಲೆ ಸಂಚರಿಸುವ ಸಕಲ ಪ್ರಾಣಿಗಳೂ ಲಯವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21-22 ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯು ಸತ್ತುಹೋಯಿತು. ಎಲ್ಲಾ ಪುರುಷರು ಮತ್ತು ಸ್ತ್ರೀಯರು ಸತ್ತುಹೋದರು. ಎಲ್ಲಾ ಪಕ್ಷಿಗಳು, ಪಶುಗಳು, ಪ್ರಾಣಿಗಳು ಮತ್ತು ಪ್ರತಿಯೊಂದು ಬಗೆಯ ಕ್ರಿಮಿಗಳು ಸತ್ತುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪಕ್ಷಿಗಳು, ಪಶುಗಳು, ಕಾಡುಮೃಗಗಳು, ನೆಲದ ಮೇಲೆ ಚಲಿಸುವ ಸಕಲ ಪ್ರಾಣಿಗಳು ಮತ್ತು ಮನುಷ್ಯರು ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:21
20 ತಿಳಿವುಗಳ ಹೋಲಿಕೆ  

ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.


ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.


ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,


ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.


ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ


ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.


ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.


ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ, ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ.


ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.


ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.


ಭೂಮಿಯು ಒಡೆದೇ ಇದೆ, ಬಿರಿದಿದೆ, ಕದಲಿಯೇ ಹೋಗಿದೆ.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.


ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.


ಸಮಸ್ತ ಜನರು ಒಟ್ಟಾಗಿ ಅಳಿದುಹೋಗುವರು, ಪುನಃ ಮನುಷ್ಯರು ಧೂಳೇ ಆಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು