ಆದಿಕಾಂಡ 8:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿನ್ನ ಬಳಿಯಿರುವ ಪ್ರಾಣಿಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲ ಜೀವಿಗಳೂ ಹೊರಗೆ ಬರಲಿ; ಅವುಗಳ ಸಂಖ್ಯೆ ಭೂಮಿಯಲ್ಲಿ ಬೆಳೆಯಲಿ; ಅವು ಹೆಚ್ಚಿ ವೃದ್ಧಿಯಾಗಲಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿವಿು ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂವಿುಯ ಮೇಲೆ ಬಹುಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ ಎಂದು ಆಜ್ಞಾಪಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿಮ್ಮೊಡನೆ ನಾವೆಯೊಳಗಿದ್ದ ಎಲ್ಲಾ ಜೀವಿಗಳು ಅಂದರೆ ಎಲ್ಲಾ ಪಕ್ಷಿಗಳು, ಪ್ರಾಣಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ ಹೊರಗೆ ಬರಲಿ. ಅವುಗಳ ಸಂತಾನವು ಹೆಚ್ಚೆಚ್ಚಾಗಲಿ; ಭೂಮಿಯ ಮೇಲೆಲ್ಲಾ ಅವು ತುಂಬಿಕೊಳ್ಳಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿನ್ನ ಬಳಿಯಲ್ಲಿರುವ ಪಕ್ಷಿ, ಪಶು, ಕ್ರಿಮಿ, ಮುಂತಾದ ಎಲ್ಲಾ ಜೀವಿಗಳನ್ನು ಹೊರಗೆ ತೆಗೆದುಕೊಂಡು ಬಾ. ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ, ಅವು ಅಭಿವೃದ್ಧಿಯಾಗಿ ಹೆಚ್ಚಲಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |