ಆದಿಕಾಂಡ 8:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.