Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಭೂಮಿಯ ಮೇಲೆಲ್ಲ ನೀರು ಇದ್ದುದರಿಂದ, ಕಾಲಿಡುವುದಕ್ಕೆ ಸ್ಥಳ ಕಾಣದೆ ಈ ಪಾರಿವಾಳ ನಾವೆಗೆ ಹಿಂತಿರುಗಿತು. ನೋಹನು ಕೈ ಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀರು ಭೂವಿುಯ ಮೇಲೆಲ್ಲಾ ಇರುವದರಿಂದ ಪಾರಿವಾಳವು ಕಾಲಿಡುವದಕ್ಕೆ ಸ್ಥಳವನ್ನು ಎಲ್ಲಿಯೂ ಕಾಣದೆ ತಿರಿಗಿ ನಾವೆಗೆ ಬಂತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀರು ಇನ್ನೂ ಇದ್ದಕಾರಣ, ಆ ಪಾರಿವಾಳ ಹಿಂತಿರುಗಿ ಬಂತು. ನೋಹನು ಕೈಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ನೀರು ಭೂಮಿಯ ಮೇಲೆಲ್ಲಾ ಇರುವುದರಿಂದ ಪಾರಿವಾಳವು ಕಾಲಿಡುವುದಕ್ಕೂ ಸ್ಥಳವನ್ನು ಕಾಣದೆ, ಅವನ ಬಳಿಗೆ ನಾವೆಗೆ ಹಿಂದಿರುಗಿತು. ಅವನು ಕೈಚಾಚಿ ಅದನ್ನು ಹಿಡಿದು, ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:9
8 ತಿಳಿವುಗಳ ಹೋಲಿಕೆ  

“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.


ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.


ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ! ಮೇಘದೋಪಾದಿಯಲ್ಲಿ ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆ ಹಾರಿ ಬರುತ್ತಿರುವ ಇವರು ಯಾರು?


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.


ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು.


ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು