ಆದಿಕಾಂಡ 9:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ಶೇಮ್ ಮತ್ತು ಯೆಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದ್ದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರಿಬ್ಬರು ಬಂದು ಹೊದಿಕೆಯನ್ನು ತೆಗೆದುಕೊಂಡು, ಬೆನ್ನಿನ ಹಿಂದೆ ಹಾಕಿಕೊಂಡು, ಹಿಂದುಹಿಂದಕ್ಕೆ ನಡೆದುಬಂದು ತಂದೆಗೆ ಅದನ್ನು ಹೊದಿಸಿ ಅವನ ಮಾನವನ್ನು ಕಾಪಾಡಿದರು. ಅವರಿಬ್ಬರು ಹಿಮ್ಮುಖರಾಗಿ ಇದ್ದುದರಿಂದ ತಂದೆ ಬೆತ್ತಲೆಯಾಗಿದ್ದುದನ್ನು ನೋಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇವರಿಬ್ಬರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂದ್ಹಿಂದಕ್ಕೆ ನಡೆದು ತಂದೆಗೆ ಹೊದಿಸಿ ಅವನ ಮಾನವನ್ನು ಕಾಪಾಡಿದರು; ಅವರು ಹಿಮ್ಮುಖರಾಗಿದ್ದದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಗ ಶೇಮನು ಮತ್ತು ಯೆಫೆತನು ಒಂದು ಕಂಬಳಿಯನ್ನು ತಮ್ಮ ಬೆನ್ನಿನ ಮೇಲೆ ಹಾಕಿಕೊಂಡು ಹಿಮ್ಮುಖವಾಗಿ ಗುಡಾರದೊಳಗೆ ಬಂದು ತಮ್ಮ ತಂದೆಗೆ ಹೊದಿಸಿದರು. ಅವರು ಅವನ ಬೆತ್ತಲೆ ದೇಹವನ್ನು ನೋಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತೆಗೆದುಕೊಂಡು, ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು, ಹಿಂಭಾಗವಾಗಿ ಹೋಗಿ, ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಮ್ಮುಖವಾಗಿದ್ದುದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ. ಅಧ್ಯಾಯವನ್ನು ನೋಡಿ |