Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕಂಡುಬಂದ ದೈವೋಕ್ತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರ್ಷಗಳಿಗೆ ಮೊದಲು ಈ ದರ್ಶನಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗ ಯಾರೊಬ್ಬಾಮನ ದಿವಸಗಳಲ್ಲಿಯೂ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ಕಂಡ ದರ್ಶನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:1
23 ತಿಳಿವುಗಳ ಹೋಲಿಕೆ  

ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.


ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.


“ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.


ಆ ಪಟ್ಟಣಗಳು ಯಾವುವೆಂದರೆ: ಬೇತ್ಲೆಹೇಮ್, ಏತಾಮ್, ತೆಕೋವ,


ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.


ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,


ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.


ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.


ಯೆಹೂದದ ಅರಸನೂ, ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಲ್ವತ್ತೊಂದು ವರ್ಷ ಆಳಿದನು.


ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.


ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.


ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು.


ಅಮಚ್ಯನ ಮರಣದ ನಂತರ ಎಲ್ಲಾ ಯೆಹೂದ್ಯರು ಸೇರಿ ಹದಿನಾರು ವರ್ಷದವನಾದ ಅಜರ್ಯನನ್ನು ಅರಸನನ್ನಾಗಿ ಮಾಡಿದರು.


“ನೀನು ಈ ಮಾತುಗಳನ್ನೆಲ್ಲಾ ಹೇಳುವಾಗ ಅವರು ಕಿವಿಗೊಡುವುದಿಲ್ಲ, ಕರೆಯುವಾಗ ಉತ್ತರಕೊಡುವುದಿಲ್ಲ.


ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.


ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.


ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು