Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಇಂತೆನ್ನುತ್ತಾರೆ: ಎದೋಮ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ಸೋದರ ನಾಡಿನವರಾದ ಇಸ್ರಯೇಲರನ್ನು ಓಡಿಸಿದರು. ಅವರಿಗೆ ಕರುಣೆತೋರದೆ, ಕೊನೆಯವರೆವಿಗೂ ರೋಷವನ್ನೇ ಸಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಇಂತೆನ್ನುತ್ತಾನೆ - ಎದೋಮು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಕತ್ತಿಹಿಡಿದು ತನ್ನ ಸಹೋದರನನ್ನು ಹಿಂದಟ್ಟಿ ಕರುಣೆಯನ್ನು ತೊರೆದು ಸಿಟ್ಟಿನಿಂದ ಸದಾ ಸಿಗಿದುಬಿಡುತ್ತಾ ತನ್ನ ಕೋಪವನ್ನು ಶಾಶ್ವತಮಾಡಿಕೊಂಡಿತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ. ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರಪ್ರಾಣಿಯಂತೆ ಇಸ್ರೇಲನ್ನು ಹರಿದುಹರಿದು ಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:11
28 ತಿಳಿವುಗಳ ಹೋಲಿಕೆ  

ಏಕೆಂದರೆ ಎದೋಮ್ಯರು ಯೆಹೂದ್ಯರ ಮೇಲೆ ತಿರುಗಿ ಯುದ್ಧಕ್ಕೆ ಬಂದು ಅವರನ್ನು ಸೋಲಿಸಿ ಅನೇಕ ಜನರನ್ನು ಸೆರೆಯಾಗಿ ಒಯ್ದಿದ್ದರು.


ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.


ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.


ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.


ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.


ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.


ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ಪ್ರೀತಿಸಿದ್ದೇನೆ.” ನೀವೋ “ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?” ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ?


ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”


ಈ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ ಸೇಯೀರ್ ಪರ್ವತ ಪ್ರದೇಶದವರನ್ನೂ ನೋಡು, ಇಸ್ರಾಯೇಲರು ಐಗುಪ್ತ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲಾ.


ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀನು ನಮಗೆ ಅನುಗ್ರಹಿಸಿದ ಸ್ವತ್ತಿನೊಳಗಿಂದ ನಮ್ಮನ್ನು ಹೊರ ಓಡಿಸುವುದಕ್ಕಾಗಿ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.


ಇಸ್ರಾಯೇಲರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು