ಆಮೋಸ 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನು ಇಂತೆನ್ನುತ್ತಾನೆ - ಅಮ್ಮೋನ್ಯರು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅವರಿಗಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |