Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಮೋಸನ ಪ್ರಕಟನೆ: ಗರ್ಜಿಸುತಿಹನು ಸರ್ವೇಶ್ವರ ಸಿಯೋನಿನಿಂದ ಧ್ವನಿಗೈಯುತಿಹನು ಜೆರುಸಲೇಮಿನಿಂದ; ಬಾಡಿಹೋಗುತ್ತಿವೆ ಕುರುಬರಾ ಹುಲ್ಲುಗಾವಲುಗಳು ಒಣಗಿಹೋಗುತ್ತಿವೆ ಕಾರ್ಮೆಲ್ ಗುಡ್ಡದ ನೆತ್ತಿಯ ಗಿಡಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಮೋಸನು ಹೀಗೆ ಪ್ರಕಟಿಸಿದನು - ಯೆಹೋವನು ಚೀಯೋನಿನಿಂದ ಗರ್ಜಿಸಿ ಯೆರೂಸಲೇವಿುನಿಂದ ದನಿಗೈಯುವನು; ಆಗ ಕುರುಬರ ಕಾವಲುಗಳು ಗೋಳಿಡುವವು, ಕರ್ಮೆಲ್ ಬೆಟ್ಟದ ತುದಿಯು ಒಣಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಮೋಸನು ಹೇಳಿದ್ದೇನೆಂದರೆ, “ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲುಗಾವಲು ಕಂದುಬಣ್ಣವಾಗಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:2
23 ತಿಳಿವುಗಳ ಹೋಲಿಕೆ  

ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.


ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು. ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವುದು.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ. “ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ” ಎಂದು ಹೇಳಿದ್ದಾರಷ್ಟೆ.


ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.


ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?


ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಹರಿದುಬಿಡುವವು.


ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು; ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವುದು.


ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.


ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.


ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.


ಕರ್ಮೆಲಿನಲ್ಲಿ ಸ್ವಂತ ಸೊತ್ತು ಹೊಂದಿದ್ದ ಒಬ್ಬ ಮನುಷ್ಯನಿದ್ದನು. ಅವನು ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ್.


ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.


ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.


ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;


ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಲುಗಾವಲನ್ನು ಬೆಂಕಿಯು ನುಂಗಿಬಿಟ್ಟಿದೆ, ವನವೃಕ್ಷಗಳನ್ನೆಲ್ಲಾ ಜ್ವಾಲೆಯು ಸುಟ್ಟುಬಿಟ್ಟಿದೆ.


ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು