Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ಇಂತೆನ್ನುತ್ತಾರೆ: ದಮಸ್ಕದ ಜನರು ಪದೇಪದೇ ಮಾಡಿರುವ ದ್ರೋಹಗಳಿಗಾಗಿ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಇಂತೆನ್ನುತ್ತಾನೆ - ದಮಸ್ಕವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಹೇಳುವುದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಹೀಗೆ ಹೇಳುತ್ತಾರೆ: ದಮಸ್ಕದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ, ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:3
26 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.


ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು.


ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು.


ಹಜಾಯೇಲನು ಅವನನ್ನು, “ನನ್ನ ಒಡೆಯಾ, ಯಾಕೆ ಅಳುತ್ತಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಾಯೇಲರಿಗೆ ಎಷ್ಟು ಕೇಡು ಮಾಡುವಿ ಎಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ. ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ. ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ. ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ” ಎಂದು ಉತ್ತರಕೊಟ್ಟನು.


ಯೆಹೋವನು ಇಂತೆನ್ನುತ್ತಾನೆ, “ಯೆಹೂದವು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು. ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ. ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು, ಇವರನ್ನು ದಾರಿ ತಪ್ಪುವಂತೆ ಮಾಡಿದವು.


ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನವರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಅದು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಬೂದಿಮಾಡಿತು.


ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.


ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.


ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ,


ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.


“ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ.


ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.


ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.


ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.


ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ.


ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.


ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.


ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.


ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.


ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.


“ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.


ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ; ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ.


ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು